ಕಾರವಾರ : ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.

ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಅತೀ ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದ್ದು, ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!



















