ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 668 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ಆಫೀಸರ್ ಹಾಗೂ ಟೆಕ್ನಿಶಿಯನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ಹುದ್ದೆಗಳು: 668
ಹುದ್ದೆ ಹೆಸರು: ಜೂನಿಯರ್ ಆಫೀಸರ್ ಹಾಗೂ ಟೆಕ್ನಿಶಿಯನ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 11
ಉದ್ಯೋಗ ಸ್ಥಳ: ದೇಶಾದ್ಯಂತ
ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟ್ರೇಡ್ ಟೆಸ್ಟ್, ಕಂಪ್ಯೂಟರ್ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 27 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂಪಾಯಿಯಿಂದ 1.08 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ powergrid.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!


















