ಬೆಂಗಳೂರು : ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (KVAFSU Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ರಿಸರ್ಚ್ ಆಫೀಸರ್, ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಅಸಿಸ್ಟಂಟ್ ರಿಸರ್ಚ್ ಆಫೀಸರ್, ಟೆಕ್ನಿಕಲ್ ಅಸಿಸ್ಟಂಟ್
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 28
ಫೀಲ್ಡ್ ವರ್ಕರ್, ಅಸಿಸ್ಟಂಟ್ ರಿಸರ್ಚ್ ಆಫೀಸರ್ ಹಾಗೂ ಟೆಕ್ನಿಕಲ್ ಅಸಿಸ್ಟಂಟ್ ತಲಾ ಒಂದೊಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ, ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ 47,250 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು kvafsu.edu.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ
The chambers of Professor & Head, Fisheries Research and Information Center (Inland), KVAFSU, Hebbal Bangalore – 94
ಇದನ್ನೂ ಓದಿ : NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!



















