ಬೆಂಗಳೂರು : ಮಹಿಳಾ ಮೀಸಲಾತಿ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಹೊಸ ತೀವ್ರತೆ ಕಾಣಿಸಿಕೊಂಡಿದೆ. ಕೇಂದ್ರದ ‘ನಾರಿ ಶಕ್ತಿ ವಂದನ್’ ಮಸೂದೆ ಹಿನ್ನಡೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಮರಕ್ಕೆ ಇಳಿದಿದೆ. ಮಹಿಳಾ ಪರ ಹೋರಾಟದ ಹೆಸರಿನಲ್ಲಿ ರಾಜಕೀಯ ಕದನ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಸ್ಪಷ್ಟವಾಗಿವೆ.
ಮಸೂದೆ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಹಾಗೂ INDIA ಮೈತ್ರಿಕೂಟವೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ. ಮಹಿಳಾ ವಿರೋಧಿ ನಿಲುವು ತಳೆದಿದೆ ಎಂಬ ಆರೋಪದೊಂದಿಗೆ ಜನಾಭಿಪ್ರಾಯ ಮೂಡಿಸಲು ಕೇಸರಿ ಪಡೆ ರಣತಂತ್ರ ರೂಪಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳಿಗೆ ಸಜ್ಜಾಗಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯ ಮೇರೆಗೆ ಇದೇ ತಿಂಗಳ (ಏ) 25ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಹಿಳಾ ಮೋರ್ಚಾದಿಂದ ಬೃಹತ್ ರ್ಯಾಲಿ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ, 27ರಿಂದ ರಾಜ್ಯದ ಎಲ್ಲಾ 224 ತಾಲ್ಲೂಕು ಕೇಂದ್ರಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಸಂಸದರಿಂದ ಸುದ್ದಿಗೋಷ್ಠಿಗಳನ್ನು ನಡೆಸಿ ಕಾಂಗ್ರೆಸ್ ವೈಫಲ್ಯವನ್ನು ಜನರಿಗೆ ಬಿಚ್ಚಿಡಲು ಸೂಚಿಸಲಾಗಿದೆ. ರಾಜ್ಯಾದ್ಯಂತ ಸರಣಿ ಪ್ರತಿಭಟನೆಗಳ ಮೂಲಕ ಮಹಿಳಾ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದ್ದು, ಈ ಹೋರಾಟ ಮುಂದಿನ ದಿನಗಳಲ್ಲಿ ರಾಜಕೀಯ ಚರ್ಚೆಗೆ ಪ್ರಮುಖ ವಿಷಯವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : 11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!



















