ಬೆಂಗಳೂರು : ನಿಮ್ಮ ಜಿಲ್ಲೆ ಅಥವಾ ತಾಲೂಕಿನಲ್ಲಿರುವ ಅಂಗನವಾಡಿಗಳಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸಮಾಚಾರ ಇದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (WCD Kalaburagi Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಲಬುರಗಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಈಗ ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದಕ್ಕೂ ಮೊದಲು ಮಾರ್ಚ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಲಬುರಗಿ
ಒಟ್ಟು ಹುದ್ದೆಗಳು: 412
ಉದ್ಯೋಗ ಸ್ಥಳ: ಕಲಬುರಗಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 30
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
89 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 323 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಕನಿಷ್ಠ 19ರಿಂದ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು
ಇದನ್ನೂ ಓದಿ : ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!



















