ಬೀದರ್ : ಜಿಲ್ಲೆಯ ಭಾಲ್ಕಿ ತಾಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್ ಬೀರೇಶ್ (31) ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.
ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ನಿವಾಸಿಯಾಗಿದ್ದ ಬೀರೇಶ್, ಸಹೋದ್ಯೋಗಿ ಸಚಿನ್ ಜೊತೆ ಲೈನ್ ಕ್ಲಿಯರೆನ್ಸ್ ಪಡೆದು ಡಿಪಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಡಿಪಿ ಮೇಲೆ ಏರಿ ಕೆಲಸ ನಿರ್ವಹಿಸುತ್ತಿದ್ದಾಗ ಅಕಸ್ಮಿಕವಾಗಿ ವಿದ್ಯುತ್ ತಗುಲಿ ಕೆಳಗೆ ಬಿದ್ದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆದ್ರೆ, ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಈ ಘಟನೆ ಖಟಕಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಕೆರೂರು ಠಾಣೆ ಪಿಎಸ್‌ಐ, ಪಿಸಿ ‘ಲೋಕಾ’ ಬಲೆಗೆ – ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!



















