ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್‌ಗೆ ಎಸೆದ ಕ್ರೂರ ಕೃತ್ಯ ಬೆಳಕಿಗೆ ಬಂದಿದೆ.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಫಾಕ್ಸ್‌ಕಾನ್ ಕಂಪೆನಿಯಲ್ಲಿ ಈ ಘಟನೆ ನಡೆದಿದೆ. ಶೌಚಾಲಯಕ್ಕೆ ಹೋದಾಗ ಮಹಿಳೆಗೆ ಆಕಸ್ಮಿಕವಾಗಿ ಮಗು ಜನಿಸಿದೆ. ಮದುವೆಯಾಗದ ಕಾರಣ ಭಯಬಿದ್ದ ಆಕೆ, ನವಜಾತ ಶಿಶುವಿನ ಜೀವ ಕಸಿದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮಗುವಿನ ಕತ್ತು ಕೊಯ್ದು ಟಾಯ್ಲೆಟ್‌ಗೆ ಎಸೆದ ನಂತರ, ಮತ್ತೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬಹಿರಂಗವಾಗಿದೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ರೇಣುಕಾ ಎಂಬ ಮಹಿಳೆ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ. ಫಾಕ್ಸ್‌ಕಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಆಕೆಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ : ವಿದ್ಯುತ್ ತಗುಲಿ ಕರ್ತವ್ಯನಿರತ ಲೈನ್‌ಮ್ಯಾನ್ ಸಾವು!


















