ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ (PNB Recruitment 2026) ಖಾಲಿ ಇರುವ 30 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ನ್ಯಾಷನಲ್ ಬ್ಯಾಂಕ್
ಒಟ್ಟು ಹುದ್ದೆಗಳು: 30
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 5
ಹುದ್ದೆಯ ಹೆಸರು: ಆಫೀಸರ್
ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ವಿಭಾಗದಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಕನಿಷ್ಠ 20ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 59 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದ ಅಭ್ಯರ್ಥಿಗಳಿಗೆ 1,180 ರೂಪಾಯಿ ನಿಗದಿಪಡಿಸಲಾಗಿದೆ. ಆನ್ ಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು pnbindia.inಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ಮಂದಿ ಪ್ರಥಮ.. 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ!



















