ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ (NABCONS Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ (NABCONS)
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 61 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nabcons.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!



















