ಬೆಂಗಳೂರು : ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿ ಕೇಂದ್ರ ಸರ್ಕಾರದ ಹುದ್ದೆಗಳಿಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಗುಡ್ ನ್ಯೂಸ್ ದೊರೆತಿದೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನೇಮಕಾತಿ ಆಯೋಗವು 84 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು (SSC Recruitment 2026) ಆಹ್ವಾನಿಸಿದೆ. ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆ ಹೆಸರು: ಹಿಂದಿ ಟ್ರಾನ್ಸ್ ಲೇಟರ್
ಒಟ್ಟು ಹುದ್ದೆ: 84
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 14
ಜೂನಿಯರ್ ಟ್ರಾನ್ಸ್ ಲೇಟರ್ ಆಫೀಸರ್, ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್, ಜೂನಿಯರ್ ಟ್ರಾನ್ಸ್ ಲೇಟರ್, ಸೀನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹಾಗೂ ಸೀನಿಯರ್ ಟ್ರಾನ್ಸ್ ಲೇಟರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಪ್ರಬಂಧ ಸ್ಪರ್ಧೆ ಮತ್ತು ಭಾಷಾಂತರ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 – 1,42,400 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ssc.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್!



















