ಕೊಪ್ಪಳ : ತಾಲೂಕಿನ ಕೂಕನಪಳ್ಳಿ ಹೊರವಲಯದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ದಾಸ್ತಾನನ್ನು ಪತ್ತೆ ಹಚ್ಚಲಾಗಿದೆ.
ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಟನ್‌ನಷ್ಟು ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂಬುದು ಗೊತ್ತಾಗಿದೆ.
ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ನಡೆಯುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ಕಿಯನ್ನು ಹೊರ ರಾಜ್ಯಗಳಿಗೆ ರಫ್ತು ಮಾಡುವ ಉದ್ದೇಶ ಹೊಂದಿದ್ದರು ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!



















