ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೊಲೀಸ್ ದೌರ್ಜನ್ಯದ ಘಟನೆ ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದೇವನಹಳ್ಳಿ ಠಾಣೆಯ ಇನ್ಸಪೆಕ್ಟರ್ ರಾಕೇಶ್ ಟೀ ಅಂಗಡಿ ಹುಡುಗನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಕನ್ನಮಂಗಲ ಗ್ರಾಮದಲ್ಲಿರುವ ಹೈವೇ ನೆಸ್ಟ್ ಟೀ ಶಾಪ್‌ನಲ್ಲಿ ಬೆಳಿಗ್ಗೆ ಸುಮಾರು 4 ಗಂಟೆಗೆ ಅಂಗಡಿ ತೆರೆದಿದ್ದ ಹುಡುಗನನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಅಂಗಡಿಯಿಂದ ಎಳೆದು ಲಾಟಿಯಿಂದ ಹೊಡೆದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ‘ಬೇಡ ಬಿಟ್ಬಿಡಿ ಸಾರ್’ ಎಂದು ಬೇಡಿಕೊಂಡರೂ ಹಲ್ಲೆ ಮುಂದುವರಿದಿದ್ದು, ಘಟನೆ ಸ್ಥಳದಲ್ಲಿದ್ದ ಗ್ರಾಹಕರು ಬೆಚ್ಚಿಬಿದ್ದಿದ್ದಾರೆ.
ಕೆಲ ತಿಂಗಳ ಹಿಂದೆ ನಡೆದಿದ್ದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗಿದ್ದು, ಇನ್ಸಪೆಕ್ಟರ್ ರಾಕೇಶ್ ಹಾಗೂ ಇತರ ಸಿಬ್ಬಂದಿಗಳ ವಿರುದ್ಧ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.
ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!



















