ಹುಬ್ಬಳ್ಳಿ, : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದೆ.
ಎರಡು ದಿನಗಳ ಹಿಂದೆ ಸದಾಶಿವ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮ ಆಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ.
ಮಹಿಳೆ ಏಕಾಂಗಿಯಾಗಿರುವುದನ್ನು ಗಮನಿಸಿದ ಕಳ್ಳ, ಏಕಾಏಕಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ ಕೈ ಹಾಕಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ತೋರಿದಾಗ, ಕಳ್ಳ ಆಕೆಯನ್ನು ರಸ್ತೆಯಲ್ಲೇ ಅಮಾನವೀಯವಾಗಿ ಎಳೆದಾಡಿದ್ದಾನೆ.
ಕಳ್ಳನ ಎಳೆದಾಟಕ್ಕೆ ಮಹಿಳೆ ರಸ್ತೆಯ ಮೇಲೆ ಬಿದ್ದರೂ ಸಹ, ಆತ ಮಾತ್ರ ಬಿಡದೆ ಬಲವಂತವಾಗಿ ಸರವನ್ನು ಕಿತ್ತುಕೊಳ್ಳು ಯತ್ನಿಸಿದ್ದಾನೆ. ಬಳಿಕ ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾನೆ. ಈ ಭಯಾನಕ ದೃಶ್ಯವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಜನನಿಬಿಡ ಪ್ರದೇಶಗಳಿಗಿಂತ ಏಕಾಂತದ ರಸ್ತೆಗಳನ್ನು ಟಾರ್ಗೆಟ್ ಮಾಡುತ್ತಿರುವ ಕಳ್ಳರು, ಹಾಡಹಗಲೇ ಇಂತಹ ಕೃತ್ಯವೆಸಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್ ವಿಡಿಯೋ ವೈರಲ್!


















