ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ‘ಕಿಲ್ಲರ್’ BMTC ಬಸ್‌ಗೆ ಯುವತಿ ಬಲಿಯಾಗಿದ್ದಾಳೆ. ಉತ್ತರಹಳ್ಳಿ ಮುಖ್ಯ ರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಿರಿಶಾ (21) ಮೃತಪಟ್ಟ ದುರ್ದೈವಿ. ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಸ್ಕೂಟಿ ಮತ್ತು ಬಿಎಂಟಿಸಿ ಬಸ್ ನಡುವೆ ಹ್ಯಾಂಡಲ್ ಟಚ್ ಆಗಿದ ಪರಿಣಾಮ ಯುವತಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ಕೂಡಲೇ ಬಸ್ ಯುವತಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ.
ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕ ಚಂದ್ರು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಆರ್‌ಆರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ : ‘ಪಾಕಿಸ್ತಾನ ಸೂಪರ್ ಲೀಗ್’ ಫೈನಲ್ ಪಂದ್ಯಕ್ಕಿಲ್ಲ ಇಂಧನ ಕೊರತೆಯ ಸಮಸ್ಯೆ!



















