ಬೆಂಗಳೂರು : ದೇಶದಲ್ಲೇ ಟಾಪ್ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಯಾಗಿರುವ, ಬೆಂಗಳೂರಿನಲ್ಲೇ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMB Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು (IIMB)
ಹುದ್ದೆ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 4
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 37 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ದೇಶದ ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು.
ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!



















