ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

April 26, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಶನಿವಾರ ರಾತ್ರಿ ಅಮೆರಿಕದ ಶ್ವೇತಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರ ವಾರ್ಷಿಕ ಔತಣಕೂಟದಲ್ಲಿ ಹಠಾತ್ ಗುಂಡಿನ ದಾಳಿ ನಡೆದಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರನ್ನು ಭದ್ರತಾ ಸಿಬ್ಬಂದಿ ತಕ್ಷಣವೇ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಈ ಆಘಾತಕಾರಿ ಘಟನೆಯಲ್ಲಿ ಟ್ರಂಪ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಕೂಡಲೇ ಬಂಧಿಸುವಲ್ಲಿ ಅಮೆರಿಕದ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ವಾಷಿಂಗ್ಟನ್‌ನ ಪ್ರಸಿದ್ಧ ಹಿಲ್ಟನ್ ಹೋಟೆಲ್‌ನಲ್ಲಿ ಈ ಅದ್ದೂರಿ ಔತಣಕೂಟವನ್ನು ಆಯೋಜಿಸಲಾಗಿತ್ತು. ಸುಮಾರು 2,600ಕ್ಕೂ ಹೆಚ್ಚು ಗಣ್ಯರು ಹಾಗೂ ಪತ್ರಕರ್ತರು ಸೇರಿದ್ದ ಈ ಕಾರ್ಯಕ್ರಮದಲ್ಲಿ ಖ್ಯಾತ ಜಾದೂಗಾರ ಓಜ್ ಪರ್ಲ್ಮನ್ ತಮ್ಮ ಪ್ರದರ್ಶನ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಐದರಿಂದ ಎಂಟು ಬಾರಿ ಗುಂಡು ಹಾರಿದ ಸದ್ದು ಕೇಳಿಸಿದೆ. ಆರಂಭದಲ್ಲಿ ಕೆಲವರು ತಟ್ಟೆಗಳು ಬಿದ್ದ ಸದ್ದು ಎಂದು ಭಾವಿಸಿದ್ದರು.

ಆದರೆ, ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾದ ‘ಸೀಕ್ರೆಟ್ ಸರ್ವೀಸ್’ ಭದ್ರತಾ ಪಡೆಗಳು, ಮಿಂಚಿನ ವೇಗದಲ್ಲಿ ವೇದಿಕೆಯತ್ತ ಧಾವಿಸಿ ಟ್ರಂಪ್ ಹಾಗೂ ಮೆಲಾನಿಯಾ ಅವರನ್ನು ಸುತ್ತುವರಿದರು. ಗುಂಡಿನ ಸದ್ದು ಕೇಳುತ್ತಿದ್ದಂತೆ ಟ್ರಂಪ್ ದಂಪತಿ ವೇದಿಕೆಯ ಕೆಳಗೆ ಅಡಗಿ ಕುಳಿತರು. ನಂತರ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಸಭಾಂಗಣದಲ್ಲಿದ್ದ ಇತರ ಗಣ್ಯರು ಹಾಗೂ ಪತ್ರಕರ್ತರು ಪ್ರಾಣರಕ್ಷಣೆಗಾಗಿ ಟೇಬಲ್‌ಗಳ ಕೆಳಗೆ ಅಡಗಿಕೊಂಡು ಆತಂಕದ ಕ್ಷಣಗಳನ್ನು ಕಳೆದರು.

ಶಸ್ತ್ರಸಜ್ಜಿತ ದಾಳಿಕೋರನ ಸೆರೆ

ದಾಳಿ ನಡೆಸಿದ ಯುವಕನನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂದು ಗುರುತಿಸಲಾಗಿದೆ. ಈತ ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಾಗೂ ಶಾರ್ಟ್-ಗನ್ ಮೂಲಕ ದಾಳಿಗೆ ಯತ್ನಿಸಿದ್ದ ಎನ್ನಲಾಗಿದೆ. ಭದ್ರತಾ ಕೋಟೆಯನ್ನು ಭೇದಿಸಿ ಒಳನುಗ್ಗಲು ಯತ್ನಿಸಿದ ಈತನನ್ನು ಸೀಕ್ರೆಟ್ ಸರ್ವೀಸ್ ಏಜೆಂಟ್‌ಗಳು ಹಿಡಿದು ನೆಲಕ್ಕೆ ಕೆಡವಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರಿಗೆ ಗುಂಡು ತಗುಲಿದೆಯಾದರೂ, ಅವರು ಬುಲೆಟ್-ಪ್ರೂಫ್ ಜಾಕೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

‘ಕಾರ್ಯಕ್ರಮ ಮುಂದುವರಿಯಲಿ’: ಟ್ರಂಪ್ ಪ್ರತಿಕ್ರಿಯೆ

ಘಟನೆಯಿಂದ ಸುರಕ್ಷಿತವಾಗಿ ಪಾರಾದ ಬಳಿಕ ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಸೀಕ್ರೆಟ್ ಸರ್ವೀಸ್ ಪಡೆಗಳ ಕಾರ್ಯಾಚರಣೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ವಾಷಿಂಗ್ಟನ್ ಡಿಸಿಯಲ್ಲಿ ಇದೊಂದು ಭಯಾನಕ ಸಂಜೆ. ಸೀಕ್ರೆಟ್ ಸರ್ವೀಸ್ ಹಾಗೂ ಕಾನೂನು ಜಾರಿ ಸಂಸ್ಥೆಗಳು ಅತ್ಯಂತ ತ್ವರಿತವಾಗಿ ಮತ್ತು ದಿಟ್ಟತನದಿಂದ ಕಾರ್ಯನಿರ್ವಹಿಸಿವೆ,” ಎಂದಿದ್ದಾರೆ. “ದಾಳಿಕೋರನೊಬ್ಬ ನನ್ನನ್ನು ಹತ್ಯೆ ಮಾಡಲು ಯತ್ನಿಸಿದ, ಆತ ಓರ್ವ ಮಾನಸಿಕ ರೋಗಿ. ಆತನನ್ನು ಬಂಧಿಸಲಾಗಿದೆ. ‘ಕಾರ್ಯಕ್ರಮ ಮುಂದುವರಿಯಲಿ’ ಎಂದು ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ,” ಎಂದು ಟ್ರಂಪ್ ಹೇಳಿದ್ದು, ಭದ್ರತಾ ಸಿಬ್ಬಂದಿ ಶೂಟರ್‌ನನ್ನು ನೆಲಕ್ಕೆ ಕೆಡವಿರುವ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

Tags: Karnataka News beat
SendShareTweet
Previous Post

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

Next Post

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

Related Posts

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!
ವಿದೇಶ

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!
ವಿದೇಶ

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!
ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!
ವಿದೇಶ

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!
ವಿದೇಶ

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

Next Post
ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ ಹಾಕಿದ ಬಿಜೆಪಿ ಮುಖಂಡ.. ವಿಡಿಯೋ ವೈರಲ್‌!

ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ ಹಾಕಿದ ಬಿಜೆಪಿ ಮುಖಂಡ.. ವಿಡಿಯೋ ವೈರಲ್‌!

ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಲಾರಿ!

ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಲಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat