ಬೆಂಗಳೂರು : ನೀವು ಎಂಎಸ್ಸಿ ಕೋರ್ಸ್ ಮುಗಿಸಿದ್ದೀರಾ? ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ III ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 01
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ III
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಮೇ 12
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 28 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಯಲಾಗುತ್ತದೆ. ಲಿಖಿತ ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Board Room and Exam Hall on the 4th floor of NBRC Building, NIMHANS, Bangalore – 560029
ಸಮಯ: ಬೆಳಗ್ಗೆ 10.30
ಇದನ್ನೂ ಓದಿ : ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!



















