ಮಡಿಕೇರಿ : ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!
ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!
ಮಧ್ಯಾಹ್ನ ಊಟಕ್ಕೆ ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ ಅಪ್ಪ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಮಗಳಿಗೆ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದಾರೆ. ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ ಮನೆಗೆ ಹೋಗಿದ್ದರು. ಅಪ್ಪ ಬರುವಷ್ಟರಲ್ಲಿ ಸೌಜನ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!



















