ಬೆಂಗಳೂರು: ರಾಜ್ಯಾದ್ಯಂತ ಉಷ್ಣಾಂಶ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಇದೀಗ ತಂಪಿನ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು,ಏಪ್ರಿಲ್ 28ರಿಂದ ಏಪ್ರಿಲ್ 30ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಗುಡುಗು-ಮಿಂಚಿನ ಜೊತೆಗಿರುವ ಮಳೆ ಹಿನ್ನೆಲೆ ಜನರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಬಿಸಿಲಿಗೆ ಈ ಮಳೆ ತಾತ್ಕಾಲಿಕ ವಿರಾಮ ನೀಡಲಿದ್ದು, ತಾಪಮಾನದಲ್ಲೂ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದೆ.. ಬಿರುಬೇಸಿಗೆಯ ನಡುವೆ ಈ ಮಳೆ ರಾಜ್ಯದ ಜನರಿಗೆ ಸ್ವಲ್ಪ ನಿರಾಳತೆಯನ್ನು ತರುವ ನಿರೀಕ್ಷೆ ಇದೆ.
ಇದನ್ನೂ ಓದಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!



















