ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 103 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 103 ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON)
ಒಟ್ಟು ಹುದ್ದೆಗಳು: 103
ಹುದ್ದೆ ಹೆಸರು: ಎಂಜಿನಿಯರ್
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 11
ಎಂಜಿನಿಯರ್, ಅಡಿಷನಲ್ ಎಂಜಿನಿಯರ್, ಡೆಪ್ಯೂಟಿ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 50 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 78 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು General Manager I/c (HR), Recruitment Section, HR Department, MECON Limited, Doranda, Ranchi, Jharkhand – 834002 ವಿಳಾಸಕ್ಕೆ ಕಳುಹಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು meconlimited.co.in ವೆಬ್ ಸೈಟ್ ಗೆ ಭೇಟಿ ನಿಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ.
ಇದನ್ನೂ ಓದಿ : ರಘುವಂಶಿ ಔಟ್ ವಿವಾದ : ಶಮಿಗೆ LSG ವಿಶೇಷ ಪ್ರಶಸ್ತಿ, KKR ಅಭಿಮಾನಿಗಳ ಆಕ್ರೋಶ!



















