ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಸುಧಾರಣೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ಭಾರಿ ಮಟ್ಟದ ಬದಲಾವಣೆ ಮಾಡಿದೆ.
ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊಡಿಸಿರುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’ ಮಾಡಿದೆ. 1998 ಬ್ಯಾಚ್‌ನ ಐಪಿಎಸ್ ಅಧಿಕಾರಿ ರವಿ ಎಸ್ ಅವರನ್ನು ಇಂಟೆಲಿಜೆನ್ಸ್ ವಿಭಾಗದಿಂದ ವರ್ಗಾವಣೆ ಮಾಡಿ, ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್‌ನ ADGPಯಾಗಿ ನೇಮಕ ಮಾಡಲಾಗಿದೆ.

ಇನ್ನು, 2004 ಬ್ಯಾಚ್‌ನ ಐಪಿಎಸ್ ಅಧಿಕಾರಿ ಲಾಭು ರಾಮ್ ಅವರನ್ನು ಸೆಂಟ್ರಲ್ ರೇಂಜ್, ಬೆಂಗಳೂರಿನ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಯಿಂದ ವರ್ಗಾವಣೆ ಮಾಡಿ, ಇಂಟೆಲಿಜೆನ್ಸ್ ವಿಭಾಗ(ಗುಪ್ತಚರ ಇಲಾಖೆ)ದ ಐಜಿಪಿಯಾಗಿ ನೇಮಕ ಮಾಡಲಾಗಿದೆ.

ಹಾಗೆಯೇ , 2012 ಬ್ಯಾಚ್‌ನ ಐಪಿಎಸ್ ಅಧಿಕಾರಿ ಎಸ್. ಗಿರೀಶ್ ಅವರನ್ನು ಆಂಟಿ ನಾರ್ಕೋಟಿಕ್ ಟಾಸ್ಕ್ ಫೋರ್ಸ್‌ನಿಂದ ವರ್ಗಾವಣೆ ಮಾಡಿ, ಸೆಂಟ್ರಲ್ ರೇಂಜ್, ಬೆಂಗಳೂರು ಡಿಐಜಿಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊಡಿಸಿದೆ.
ಇದನ್ನೂ ಓದಿ : ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ.. 8 ಮಂದಿಗೆ ಗಂಭೀರ ಗಾಯ!



















