ಬೆಂಗಳೂರು : ನೀವು ಯಾದಗಿರಿ ಅಥವಾ ನಗರದ ಆಸುಪಾಸಿನವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ.
ಹೌದು, ಯಾದಗಿರಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (WCD Yadgir Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಡಿಸ್ಟ್ರಿಕ್ಟ್ ಮಿಷನ್ ಕೋ-ಆರ್ಡಿನೇಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿ
ಒಟ್ಟು ಹುದ್ದೆಗಳು: 01
ಹುದ್ದೆ ಹೆಸರು: ಡಿಸ್ಟ್ರಿಕ್ಟ್ ಮಿಷನ್ ಕೋ-ಆರ್ಡಿನೇಟರ್
ಉದ್ಯೋಗ ಸ್ಥಳ: ಯಾದಗಿರಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 05
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು. 21 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೌಶಲ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ yadgir.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅರ್ಜಿ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ ಸಿ-17, ಮೊದಲ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ, ಯಾದಗಿರಿ-585202.
ಇದನ್ನೂ ಓದಿ : ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!



















