ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

April 29, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ಮೇಘಾಲಯ ಹನಿಮೂನ್ ಮರ್ಡರ್ ಎಂದೇ ಕುಖ್ಯಾತಿ ಪಡೆದಿರುವ ಪ್ರಕರಣದ ಆರೋಪಿ ಸೋನಂ ರಘುವಂಶಿಗೆ ಮೇಘಾಲಯದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬಂಧನದ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಪೊಲೀಸರು ಮಾಡಿದ ಒಂದು ಬಹುದೊಡ್ಡ ಎಡವಟ್ಟು, ಪ್ರಮುಖ ಆರೋಪಿಗೆ ಸುಲಭವಾಗಿ ಜಾಮೀನು ಸಿಗುವಂತೆ ಮಾಡಿದೆ.

ಅಸ್ತಿತ್ವದಲ್ಲಿಯೇ ಇಲ್ಲದ ಕಾನೂನಿನ ಸೆಕ್ಷನ್ ಅನ್ನು ಪೊಲೀಸರು ಉಲ್ಲೇಖಿಸಿದ್ದು ಈ ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ. ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದಾಗ ಪತಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪ ಎದುರಿಸುತ್ತಿರುವ ಸೋನಂ ಪೊಲೀಸರ ಎಡವಟ್ಟಿನಿಂದಾಗಿ ಈಗ ಜೈಲಿನಿಂದ ಹೊರಬರುವಂತಾಗಿದೆ.

ಹಳೆಯ ಭಾರತೀಯ ದಂಡ ಸಂಹಿತೆಯ (IPC) ಬದಲಿಗೆ ಜಾರಿಗೆ ಬಂದಿರುವ ನೂತನ ‘ಭಾರತೀಯ ನ್ಯಾಯ ಸಂಹಿತೆ’ಯ (BNS) ಅಡಿಯಲ್ಲಿ ಬಾರದ ‘ಸೆಕ್ಷನ್ 403(1)’ ಅನ್ನು ಪೊಲೀಸರು ಆಕೆಯ ಬಂಧನದ ಮೆಮೊ, ತಪಾಸಣಾ ಮೆಮೊ ಹಾಗೂ ಕೇಸ್ ಡೈರಿಯಲ್ಲಿ ದಾಖಲಿಸಿದ್ದರು. ವಾಸ್ತವದಲ್ಲಿ ಬಿಎನ್‌ಎಸ್ ಅಡಿಯಲ್ಲಿ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದ ಸೆಕ್ಷನ್ 103(1) ಆಗಿದೆ. ಇದು ಕೇವಲ ಟೈಪಿಂಗ್ ಅಥವಾ ಗುಮಾಸ್ತರ ದೋಷ ಎಂದು ಪೊಲೀಸರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಆದರೆ, ಪೊಲೀಸರ ಈ ವಾದವನ್ನು ಸಾರಾಸಗಟಾಗಿ ತಳ್ಳಿಹಾಕಿದ ನ್ಯಾಯಾಲಯ, ಆರೋಪಿಗೆ ಬಂಧನದ ಹಿಂದಿನ ‘ಪರಿಣಾಮಕಾರಿ ಕಾರಣಗಳನ್ನು’ ಸ್ಪಷ್ಟವಾಗಿ ತಿಳಿಸಿಲ್ಲ. ಹಾಗಾಗಿ ಈ ಬಂಧನವೇ ಕಾನೂನುಬಾಹಿರ ಎಂದು ಅಭಿಪ್ರಾಯಪಟ್ಟು ಜಾಮೀನು ನೀಡಿದೆ.

ವಕೀಲರ ಸಂಪರ್ಕಕ್ಕೂ ಅವಕಾಶ ನೀಡದ ಆರೋಪ

ಕೇವಲ ಸೆಕ್ಷನ್ ಉಲ್ಲೇಖದಲ್ಲಿನ ದೋಷವಷ್ಟೇ ಅಲ್ಲದೆ, ಪೊಲೀಸರ ಮತ್ತೊಂದು ಪ್ರಮುಖ ಲೋಪವನ್ನು ಕೂಡ ನ್ಯಾಯಾಲಯವು ಬೊಟ್ಟು ಮಾಡಿದೆ. ಸೋನಂಳನ್ನು ಬಂಧಿಸಿದ ಬಳಿಕ ಉತ್ತರ ಪ್ರದೇಶದ ಗಾಜೀಪುರ ನ್ಯಾಯಾಲಯಕ್ಕೆ ಮೊದಲ ಬಾರಿಗೆ ಹಾಜರುಪಡಿಸಿದಾಗ, ಆಕೆಗೆ ವಕೀಲರ ಸಂಪರ್ಕ ಒದಗಿಸಿರುವ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲ ಎಂದು ಕೋರ್ಟ್ ಹೇಳಿದೆ. ಈ ಕಾರಣದಿಂದಾಗಿ ಆಕೆ ತನ್ನ ಬಂಧನ ಪ್ರಕ್ರಿಯೆಯಲ್ಲಿದ್ದ ದೋಷಗಳನ್ನು ಆರಂಭಿಕ ಹಂತದಲ್ಲಿಯೇ ಪ್ರಶ್ನಿಸಲು ಸಾಧ್ಯವಾಗಲಿಲ್ಲ, ಇದು ಆಕೆಯ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

ಷರತ್ತುಬದ್ಧ ಜಾಮೀನಿಗೆ ಸಹೋದರನ ಅಸಮಾಧಾನ

ಸೋನಂಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದ್ದು, ಪೂರ್ವಾನುಮತಿ ಇಲ್ಲದೆ ಶಿಲ್ಲಾಂಗ್ ಜಿಲ್ಲೆಯನ್ನು ಬಿಟ್ಟು ಹೋಗುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇತ್ತ ಸಹೋದರಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಆಕೆಯ ಅಣ್ಣ ಗೋವಿಂದ್ ರಘುವಂಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಆಕೆಗೆ ಜಾಮೀನು ಸಿಕ್ಕಿರುವ ವಿಚಾರವಷ್ಟೇ ನಮಗೆ ತಿಳಿದಿದೆ, ಆದರೆ ಆಕೆ ಸದ್ಯ ಎಲ್ಲಿ ಇರುತ್ತಾಳೆಂಬುದು ಗೊತ್ತಿಲ್ಲ. ನಾವು ಸದ್ಯಕ್ಕೆ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿಯಲ್ಲಿಲ್ಲ. ಒಂದು ವೇಳೆ ನನ್ನ ಪೋಷಕರು ಆಕೆಯನ್ನು ಮನೆಗೆ ಕರೆತಂದರೆ, ನಾನು ಮನೆಯಲ್ಲಿ ಇರುವುದಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ.

ಏನಿದು ಪ್ರಕರಣ?

ಕಳೆದ ವರ್ಷ, 2025ರ ಮೇ ತಿಂಗಳಲ್ಲಿ ರಾಜಾ ರಘುವಂಶಿ ಹಾಗೂ ಸೋನಂ ವಿವಾಹವಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಈ ನವದಂಪತಿ ಮಧ್ಯಪ್ರದೇಶದ ಇಂದೋರ್‌ನಿಂದ ಮೇಘಾಲಯದ ಶಿಲ್ಲಾಂಗ್‌ಗೆ ಹನಿಮೂನ್‌ಗಾಗಿ ತೆರಳಿದ್ದರು. ಆದರೆ, ಪ್ರವಾಸಕ್ಕೆ ಹೋದ ಕೆಲವೇ ದಿನಗಳಲ್ಲಿ ಪತಿ ರಾಜಾ ನಾಪತ್ತೆಯಾಗಿದ್ದ. ಬಳಿಕ ಜೂನ್ 2ರಂದು ಆತನ ಮೃತದೇಹ ಪ್ರಪಾತವೊಂದರಲ್ಲಿ ಪತ್ತೆಯಾಗಿತ್ತು. ತನ್ನ ಪತಿಯನ್ನು ಕೊಲೆ ಮಾಡಲು ಸೋನಂ ಹಲವರೊಂದಿಗೆ ಸೇರಿ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಳು ಎಂದು ಪೊಲೀಸರು ತನಿಖೆ ವೇಳೆ ಆರೋಪಿಸಿದ್ದರು. ಈ ಹೈ-ಪ್ರೊಫೈಲ್ ಪ್ರಕರಣದಲ್ಲಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಈ ಹಿಂದೆ ಮೂವರಿಗೆ ಜಾಮೀನು ಸಿಕ್ಕಿತ್ತು. ಇದೀಗ ಬಂಧನ ಪ್ರಕ್ರಿಯೆಯಲ್ಲಿನ ಗಂಭೀರ ಲೋಪದಿಂದಾಗಿ ಪ್ರಮುಖ ಆರೋಪಿಯೂ ಜಾಮೀನು ಪಡೆದು ಹೊರಬಂದಿರುವುದು ಪ್ರಕರಣದ ಮುಂದಿನ ದಿಕ್ಕನ್ನು ಬದಲಿಸುವ ಸಾಧ್ಯತೆಯಿದೆ.

ಇದನ್ನೂ ಓದಿ : ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

Tags: IndiaKarnataka News beat
SendShareTweet
Previous Post

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

Next Post

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

Next Post
SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat