ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ದೇಶದ ಅಗ್ರ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆ ಎನಿಸಿರುವ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ (IIMB Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB)
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 8
ಕೇಸ್ ರೈಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!



















