ಬೆಂಗಳೂರು : ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂಬುದು ಕೋಟ್ಯಂತರ ಭಾರತೀಯರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಈಗ ಅವಕಾಶ ಬಂದಿದೆ. ಭಾರತೀಯ ಸೇನೆಯಲ್ಲಿ (Indian Army Recruitment 2026) ಖಾಲಿ ಇರುವ 190 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಹುದ್ದೆ ಹೆಸರು: CSBO Grade-II
ಉದ್ಯೋಗ ಸ್ಥಳ: ದೇಶಾದ್ಯಂತ
ಒಟ್ಟು ಹುದ್ದೆ: 190
ಅರ್ಜಿ ಸಲ್ಲಿಕೆಯ ವಿಧಾನ: ಆನ್ ಲೈನ್
ಸಿವಿಲಿಯನ್ ಸ್ವಿಚ್ ಬೋರ್ಡ್ ಆಪರೇಟರ್ ಗ್ರೇಡ್-2 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಲ್ಲಿಯವರೆಗೆ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ joinindianarmy.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್ ವಿರುದ್ದ ಕೊಹ್ಲಿ ಗರಂ!


















