ಬೆಂಗಳೂರು : ವಿದ್ಯಾರ್ಥಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ. ಎ.ಪಿ.ಆದಿತ್ಯ(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. 2ನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಏಪ್ರಿಲ್ 29ರಂದೇ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಇನ್ನು ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದಾರೆ. ಮಾದಕವಸ್ತು ಸೇವನೆ ಕೇಸ್ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಪ್ರದೀಪ್ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!



















