ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಮುಂದುವರಿದ ಮಳೆಯ ವಾತಾವರಣ ಜನಜೀವನದ ಮೇಲೆ ಭಾರೀ ಪರಿಣಾಮ ಬೀರಿದೆ.
ರಾಜ್ಯದ ಒಟ್ಟು 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದ್ದು, ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದೆ. ಇನ್ನು ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಮುಂದುವರಿಯಲಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ : CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!



















