ಕೊಪ್ಪಳ : ಜಿಲ್ಲೆಯಲ್ಲೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ. ಧಾರವಾಡದಿಂದ ಅಂಜನಾದ್ರಿ ಹನುಮನ ದರ್ಶನಕ್ಕೆ ತೆರಳುತ್ತಿದ್ದ ಈ ಕ್ರೂಸರ್ ವಾಹನದಲ್ಲಿ ಒಟ್ಟು 10 ಜನ ಪ್ರಯಾಣಿಸುತ್ತಿದ್ದರು.
ಅಪಘಾತದಲ್ಲಿ ಅಮನ್ ಜೈನ್ (18) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಹಾಗೂ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್!


















