ಬೆಂಗಳೂರು : ಹಿಟ್ & ರನ್‌ಗೆ ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಬೈಕ್ ಸವಾರ ಗಿರೀಶ್ (30) ಮೃತ ದುರ್ದೈವಿ.
ಶುಕ್ರವಾರ ಗಿರೀಶ್ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ತಡರಾತ್ರಿ 12:41ರ ಸುಮಾರಿಗೆ ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಜಯಮ್ಮ ಹಾಗೂ ಪಾಪಣ್ಣ ದಂಪತಿಯ ಮಗ ಗಿರೀಶ್, ತಂದೆಯ ಮರಣದ ಬಳಿಕ ಡ್ರೈವಿಂಗ್ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದರು. ಶುಕ್ರವಾರ ತಡರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತದ ಬಳಿಕ ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಾಟಾ ಏಸ್ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್!



















