ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (Ministry of External Affairs Recruitment 2026) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಫ್ಯಾಕಲ್ಟಿ ಮೆಂಬರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಒಟ್ಟು ಹುದ್ದೆಗಳು: 2
ಹುದ್ದೆಯ ಹೆಸರು: ಫ್ಯಾಕಲ್ಟಿ ಮೆಂಬರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 17
ನವದೆಹಲಿಯಲ್ಲಿರುವ ಸಚಿವಾಲಯದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.72 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ mea.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಶ್ರೀ ಪ್ರದೀಪ್ ಕುಮಾರ್ ಎಲ್.
ಅಧೀನ ಕಾರ್ಯದರ್ಶಿ (ಆಡಳಿತ),
ಕೊಠಡಿ ಸಂಖ್ಯೆ 002, ಸುಷ್ಮಾ ಸ್ವರಾಜ್ ವಿದೇಶಾಂಗ ಸೇವಾ ಸಂಸ್ಥೆ,
ವಿದೇಶಾಂಗ ವ್ಯವಹಾರಗಳ ಸಚಿವಾಲಯ,
ಬಾಬಾ ಗಂಗ್ ನಾಥ್ ಮಾರ್ಗ, ನವದೆಹಲಿ-110067.
ಇದನ್ನೂ ಓದಿ : 8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!



















