ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದೆ. ಮತ ಎಣಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಜೀವರಾಜ್ 52 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ಆದರೆ, ಇದುವರೆಗೂ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡಿಲ್ಲ. ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ರವಾನೆ ಮಾಡಲಾಗಿದೆ. ಕಾಂಪ್ಲಿಕೇಶನ್ ಹಾಗೂ ಸೂಕ್ಷ್ಮ ವಿಚಾರವಾಗಿರುವುದರಿಂದ ಫಲಿತಾಂಶ ಘೋಷಣೆ ಬಾಕಿ ಇದೆ.
ಈ ಕುರಿತು ಬಿಜೆಪಿ ಅಭ್ಯರ್ಥಿ ಮಾತನಾಡಿದ್ದು, ಅಧಿಕೃತ ಅಂತರದ ಬಗ್ಗೆ ಏನೂ ಹೇಳಿಲ್ಲ. ಆದರೆ, ನಾನು ಮುನ್ನಡೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. 3 ವರ್ಷದ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಜೀವರಾಜ್ ಪ್ರತಿಕ್ರಿಯಿಸಿದ್ದಾರೆ.
ಮತ ಪತ್ರಗಳನ್ನ ಸ್ಟ್ರಾಂಗ್ ರೂಂನಲ್ಲಿ ಸೀಲ್ ಮಾಡಿದ ಬಳಿಕ ಚುನಾವಣಾ ಅಧಿಕಾರಿ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ಅಂಚೆ ಮತಗಳ ಮರು ಎಣಿಕೆ ಪೂರ್ಣವಾಗಿದೆ. ಮರು ಎಣಿಕೆ ನಡೆದಿರುವುದು ಅಂಚೆ ಮತಗಳು ಮಾತ್ರ. 1822 ಅಂಚೆ ಮತಗಳನ್ನ ಮರು ಪರಿಶೀಲನೆ, ಎಣಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಮತ ಬಿದ್ದಿತ್ತು. 2026ರ ಮರು ಎಣಿಕೆಯಲ್ಲಿ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ (T.D.Raje Gowda) ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಎಲ್ಲಾ ವರದಿಗಳನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ. ಮತ ಟ್ಯಾಂಪರಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಅಧಿಕಾರ ಇಲ್ಲ. ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.



















