ಬೆಂಗಳೂರು: ಕೇಂದ್ರ ಜವಳಿ ಸಚಿವಾಲಯದಲ್ಲಿ ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 20 ಲೀಗಲ್ ಪ್ರೊಫೇಷನಲ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ (Ministry of Textiles Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯಬರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಜವಳಿ ಸಚಿವಾಲಯ
ಒಟ್ಟು ಹುದ್ದೆಗಳು: 20
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಲೀಗಲ್ ಪ್ರೊಫೇಷನಲ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 25
ಉದ್ಯೋಗ ಸ್ಥಳ: ದೇಶಾದ್ಯಂತ
18 ಯಂಗ್ ಪ್ರೊಫೇಷನಲ್, 2 ಲೀಗಲ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂಬಿಎ, ಎಲ್ ಎಲ್ ಎಂ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸ್ಕ್ರೀನಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ texmin.nic.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಜವಳಿ ಆಯುಕ್ತರ ಕಚೇರಿ,
ಜವಳಿ ಸಚಿವಾಲಯ, ಭಾರತ ಸರ್ಕಾರ,
ನಿಷ್ಠಾ ಭವನ್ (ಹೊಸ ಸಿಜಿಒ ಕಟ್ಟಡ),
48, ನ್ಯೂ ಮೆರಿನ್ ಲೈನ್ಸ್,
ಮುಂಬೈ – 400020.



















