ರಾಯಚೂರು : ರಾಯಚೂರಿನ ಯಾಪಲದಿನ್ನಿ ಗ್ರಾಮದಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯೋರ್ವನ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 35 ವರ್ಷದ ಈಶಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು, ಆತ ಸಪ್ಲೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.
ಈಶಪ್ಪ ಮೃತದೇಹ ಮನೆ ಹಿಂಭಾಗದಲ್ಲಿ ಪತ್ತೆಯಾಗಿದ್ದು, ಕುತ್ತಿಗೆಯಲ್ಲಿನ ಗುರುತು ಹಿನ್ನೆಲೆ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನೊಂದೆಡೆ, ನಿನ್ನೆ ರಾತ್ರಿ ಗ್ರಾಮದಿಂದ ಯುವಕ ಮತ್ತು ಯುವತಿ ಪರಾರಿಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಈಶಪ್ಪನ ಸಾವಿಗೂ ಅವರ ಪರಾರಿಗೂ ಸಂಬಂಧ ಇರಬಹುದು ಎಂದು ಮೃತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಘಟನೆ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ



















