ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ರಿಸರ್ಚರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ರಿಸರ್ಚರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 8
ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ sanyal.@jncasr.ac.in ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : “ದುಷ್ಮನ್ ಬಗಲ್ ಮೇ ಹೈ” – ಸಚಿವ ಜಮೀರ್ ಮನೆಯಲ್ಲೇ ಚಿನ್ನ ದೋಚಿದ ಸಂಬಂಧಿಕರು ಅರೆಸ್ಟ್!



















