ಬೆಂಗಳೂರು : ನೀವು ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಬಂದೊದಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 02
ಹುದ್ದೆ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 14
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!



















