ದಾವಣಗೆರೆ : ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿಯಾಗಿರುವ ವಚನಾನಂದ ಸ್ವಾಮೀಜಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸ್ವಾಮೀಜಿ ತನಿಖೆಗೆ ಸಂಪೂರ್ಣ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ಮಠದಲ್ಲಿ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಅವರು, ಏಪ್ರಿಲ್ 21ರಂದು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಸರ್ಕಾರಿ ಅಭಿಯೋಜಕರ ಆಕ್ಷೇಪಣೆ ಹಾಗೂ ಪ್ರತಿವಾದಗಳನ್ನು ಆಲಿಸಿದ ನಂತರ ಜಾಮೀನು ಮಂಜೂರು ಮಾಡಿದ್ದು, ಶ್ರೀಗಳಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಪ್ರಾಪ್ತ ಮಕ್ಕಳು ಮತ್ತು ಸಂವೇದನಾಶೀಲ ಪ್ರಕರಣಗಳಿಗೆ ಸಂಬಂಧಿಸಿದ ಆದೇಶದ ಪ್ರತಿಗಳನ್ನು ಸಾರ್ವಜನಿಕವಾಗಿ ಯಾರಿಗೂ ಸಿಗದಂತೆ ಗೌಪ್ಯವಾಗಿಡಲಾಗಿದೆ.
ಇದನ್ನೂ ಓದಿ : 9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!



















