ಬೆಂಗಳೂರು : ಯುವತಿಯೊಂದಿಗೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಸದಾಶಿವನಗರದಲ್ಲಿ ನಡೆದಿದೆ. ಸ್ನೇಹಿತನ ಜೊತೆ ವಾಕಿಂಗ್‌ಗೆ ತೆರಳಿದ್ದ ಯುವತಿಯನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ.
ಯುವತಿ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೇಳೆ ಕಪ್ಪು ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ, ಯುವತಿಗೆ ಬ್ಯಾಡ್ ಟಚ್ ಮಾಡಿ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಗೆ ಬೆಚ್ಚಿಬಿದ್ದ ಯುವತಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಬೈಕ್ ನಂಬರ್ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!



















