ಬೆಂಗಳೂರು : ನೀವು ದಾವಣಗೆರೆ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ (Indian Institute of Education Recruitment 2026) ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಶಿಕ್ಷಣ ಸಂಸ್ಥೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಶಿಕ್ಷಕರು
ಉದ್ಯೋಗ ಸ್ಥಳ: ಹೊನ್ನಾಳಿ, ದಾವಣಗೆರೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 11
ಗಣಿತ, ವಿಜ್ಞಾನ, ಇಂಗ್ಲಿಷ್, ಸಮಾಜಶಾಸ್ತ್ರ, ಹಿಂದಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎ ಬಿ.ಎಡ್, ಬಿಎಸ್ಸಿ ಬಿ.ಎಡ್, ಡಿ.ಎಡ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 28 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೇ 14 ಹಾಗೂ 15ರಂದು ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ indianinstituteofeducation.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮುಖ್ಯೋಪಾಧ್ಯಾಯರು,
ಭಾರತೀಯ ವಿದ್ಯಾ ಸಂಸ್ಥೆ (ರಿ.),
ಸಂತೆ ಮೈದಾನದ ಹತ್ತಿರ, ಹೊನ್ನಾಳಿ,
ದಾವಣಗೆರೆ ಜಿಲ್ಲೆ,
ಪಿನ್ ಕೋಡ್-577217.
ಇದನ್ನೂ ಓದಿ : SBI ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಶಾಕಿಂಗ್ ನ್ಯೂಸ್ : ಈ ಶುಲ್ಕ ಹೆಚ್ಚಳ ನಿಯಮ ತಿಳಿಯಿರಿ



















