ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ 245 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೂಪರ್ ವೈಸರ್ ಹಾಗೂ ಆಪರೇಟರ್ ಹುದ್ದೆಗಳನ್ನು ಭರ್ತಿ (Aadhaar Seva Center Recruitment 2026) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆಗಳು: 245
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 20
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 18 ವರ್ಷ ದಾಟಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡೀಗಢ, ಗುಜರಾತ್ ಹರಿಯಾಣ ಸೇರಿ ದೇಶದ ಹಲವು ರಾಜ್ಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ 75 ಹುದ್ದೆಗಳು ಖಾಲಿ ಇವೆ. ಆಸಕ್ತಿ ಇರುವ ಅಭ್ಯರ್ಥಿಗಳು csc.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!



















