ಬೆಳಗಾವಿ : ಸಾರ್ವಜನಿಕ ಸ್ಥಳದಲ್ಲಿ ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದ ಕಾಲೇಜು ರಸ್ತೆ ಬಳಿ ನಡೆದಿದೆ.
ಶಂಕರ ಬಂಡಿವಡ್ಡರ ಬಂಧಿತ ಆರೋಪಿ. ಈತ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿ ಗನ್ ಇಟ್ಟುಕೊಂಡು ನಗರದಲ್ಲಿ ಓಡಾಡುತ್ತಿದ್ದ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಪಡೆದ ಖಡೇಬಜಾರ್ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ರಿವಾಲ್ವರ್ ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ.
ಗನ್ ಪರವಾನಗಿ ಹೊಂದಿದ್ದಾನೆಯೇ ಅಥವಾ ಅಕ್ರಮವಾಗಿ ಇಟ್ಟುಕೊಂಡಿದ್ದಾನೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿದ್ದ ಹಿನ್ನೆಲೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್ – ಸಂಕಷ್ಟದಲ್ಲಿ PSL!


















