ಬೆಂಗಳೂರು : ನೀವೇನಾದರೂ ಎಂಜಿನಿಯರಿಂಗ್ ಮುಗಿಸಿ, ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Recruitment 2026) ಖಾಲಿ ಇರುವ 27 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 27 ಎಂಜಿನಿಯರ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಎಂಜಿನಿಯರ್, ಮ್ಯಾನೇಜರ್
ಒಟ್ಟು ಹುದ್ದೆಗಳು: 27
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 14
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 39 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ : ಮೇ 15ರೊಳಗೆ ಪೆಟ್ರೋಲ್, ಡೀಸೆಲ್ ದರ ಭಾರೀ ಹೆಚ್ಚಳ ಸಾಧ್ಯತೆ!



















