ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

May 10, 2026
Share on WhatsappShare on FacebookShare on Twitter

ಬೆಂಗಳೂರು : ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು. ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು. ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ. ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಸಂಸದೆ ಮಲ್ಲಿಕಾರ್ಜುನ ಪ್ರಭಾಕರ್ ಅವರು ಪ್ರತಿಕ್ರಿಯೆ ನೀಡಿ, ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ನಿಧನರಾದ ವಿಷಯ‌ ತಿಳಿದು ದುಃಖವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಸಚಿವ ಮಹದೇವಪ್ಪ ಅವರು ಪ್ರತಿಕ್ರಿಯೆ ನೀಡಿ, ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ನಿಧನರಾದ ವಿಷಯ‌ ತಿಳಿದು ದುಃಖವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರತಿಕ್ರಿಯಿಸಿ, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರು ಮತ್ತು ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್‌ ಅವರ ನಿಧನಕ್ಕೆ ನನ್ನ ಸಂತಾಪಗಳು. ಭಗವಂತನ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರತಿಕ್ರಿಯಿಸಿ, ಆತ್ಮೀಯರು, ಹಿರಿಯೂರಿನ ಶಾಸಕರು ಹಾಗೂ ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯೆಕ ಸಚಿವರಾಗಿದ್ದ ಸಂಪುಟ ಸಹದ್ಯೋಗಿ ಡಿ. ಸುಧಾಕರ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಹೇಳಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಅವರು ಗುಣಮುಖರಾಗುವ ವಿಶ್ವಾಸವಿತ್ತು, ಆದರೆ ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ಸುಧಾಕರ್ ರವರು ಜನಾನುರಾಗಿಯಾಗಿ ಹೆಸರು ಮಾಡಿದ್ದಂತಹವರು, ಅವರಿಂದ ಇನ್ನಷ್ಟು ಜನಪರ ಕೆಲಸಗಳು ಆಗಬೇಕಾಗಿದ್ದವು, ಆದರೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ಆಘಾತಕಾರಿಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.

ಸಚಿವ ಎಂಬಿ.ಪಾಟೀಲ್ ಅವರು ಪ್ರತಿಕ್ರಿಯಿಸಿ, ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಸದಾ ಸ್ಮರಣೀಯರಾಗಿರುತ್ತಾರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಬಂಧು-ಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯಿಸಿ, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಶ್ರೀ ಡಿ.ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ಅಗಾಧ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

Tags: CongressKarnataka News beatPolitician
SendShareTweet
Previous Post

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

Next Post

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

Related Posts

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!
ಚಿಕ್ಕಮಗಳೂರು

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!
ರಾಯಚೂರು

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!
ಚಾಮರಾಜನಗರ

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!
ವಿಜಯನಗರ

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!
ಉಡುಪಿ

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

Next Post
ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ 'ಮಾಸ್ಟರ್ ಸ್ಟ್ರೋಕ್' ಇದೆ ಎಂದ DMK

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

Recent News

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat