ಬೆಂಗಳೂರು : ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ ಮೈಸೂರು (CESCOM Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 200 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈಗಷ್ಟೇ ಎಂಜಿನಿಯರಿಂಗ್ ಕೋರ್ಸ್ ಮುಗಿಸಿದವರಿಗೆ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ ಮೈಸೂರು
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 200
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 29
80 ಎಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್, 55 ಟೆಕ್ನಿಶಿಯನ್ ಡಿಪ್ಲೋಮಾ ಅಪ್ರೆಂಟಿಸ್ ಹಾಗೂ 65 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಡಿಪ್ಲೋಮಾ, ಬಿ.ಕಾಂ, ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ cescmysore.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಜನರಲ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ : ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು? ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!



















