ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಜನರಲ್ ಮ್ಯಾನೇಜರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರೈಲ್ ವಿಕಾಸ್ ನಿಗಮ್ ಲಿಮಿಟೆಡ್
ಹುದ್ದೆ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 4
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೂಲ ಸೌಕರ್ಯ ಯೋಜನೆಗಳು, ರೈಲ್ವೆ ಎಲೆಕ್ಟ್ರಿಫಿಕೇಶನ್, ಮೆಟ್ರೋ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವ ಇರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿಯಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ rvnl.orgವೆಬ್ ಸೈಟ್ ಗೆ ಭೇಟಿ ನೀಡಬೇಕು. ಜನರಲ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ (ಪಿಡಿಎಫ್ ಮಾದರಿಯಲ್ಲಿ) rvnl.deputation@rvnl.org ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ



















