ಬೆಂಗಳೂರು : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 3 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು? ಉದ್ಯೋಗ ಸ್ಥಳ ಎಲ್ಲಿ ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 3
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಹುದ್ದೆಗಳ ಹೆಸರು: ಡೇಟಾ ಎಂಟ್ರಿ ಆಪರೇಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 17
ಕರ್ನಾಟಕದ ಬೆಂಗಳೂರು, ಪುದುಚೇರಿ ಹಾಗೂ ನವದೆಹಲಿಯಲ್ಲಿರುವ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ತಲಾ ಒಂದು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ nimhans.ac.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು project.dr.dhavalshukla@gmail.com ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!



















