ಮೈಸೂರು : ಇದೀಗ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಾಲಾ ಸಮವಸ್ತ್ರ ಕುರಿತು 2022ರ ಆದೇಶ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಇಲ್ಲ. ಜನಿವಾರ, ಶಿವದಾರ ಹಿಜಾಬ್ ಹಾಕಿಕೊಳ್ಳಬಹುದು. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶವಿದೆ ಕೇಸರಿ ಶಾಲಿಗೆ ಅವಕಾವಿಲ್ಲ ಎಂದಿದ್ದಾರೆ.
ಇನ್ನು, ಕೇಸರಿ ಪೇಟಕ್ಕೂ ಕೂಡ ಅವಕಾಶವಿಲ್ಲ ಮೊಲಿನಿಂದಲೂ ಯಾವ ಪೇಟಗಳಿತ್ತು ಆ ಪೇಟಗಳಿಗಷ್ಟೇ ಅವಕಾಶ. ಈಗ ಪೇಟಕ್ಕೆ ಬಣ್ಣದ ಬದಲಾವಣೆ ಮಾಡಿಕೊಂಡರೆ ಅವಕಾಶವಲ್ಲ. ನಾವು ಹಿಜಾಬ್ ಮಾತ್ರ ಅವಕಾಶ ಕೊಟ್ಟಿಲ್ಲ, ಜನಿವಾರ, ಶಿವದಾರ, ರುದ್ರಾಕ್ಷಿ ಸರಕ್ಕೂ ಅವಕಾಶ ಕೋಟ್ಟಿದ್ದೇವೆ. ಆದರೆ, ಹೊಸ ರೂಪದ ಪೇಟಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿಗಳ ಹೇಳಿಕೆ ಸರಿಯಿಲ್ಲ :
ಪ್ರಧಾನಿ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದರ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು. ಇನ್ನು, ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಇನ್ಮುಂದೆ ಸರ್ಕಾರಿ ಸೌಲಭ್ಯಗಳು ಕಟ್!


















