ಬೆಂಗಳೂರು : ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.15) 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ.

ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿ.ಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ.

ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ.

ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಓವರ್ಟನ್ ಟೂರ್ನಿಯಿಂದ ಔಟ್ ; ಸೌತ್ ಆಫ್ರಿಕಾ ಆಲ್‌ರೌಂಡರ್ ಡಿಯನ್ ಫಾರೆಸ್ಟರ್‌ಗೆ CSK ಮಣೆ!


















