ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವ್ಯಾಪ್ತಿಗೆ ಬರುವ ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ (NBSSLUP Recruitment 2026)ದಲ್ಲಿ ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 13 ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ (NBSSLUP)
ಹುದ್ದೆಗಳ ಹೆಸರು: ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 30
ಕರ್ನಾಟಕದ ಬೆಂಗಳೂರು, ಮಹಾರಾಷ್ಟ್ರದ ನಾಗ್ಪುರ, ಪಶ್ಚಿಮ ಬಂಗಾಳದ ಕಲ್ಕತ್ತ, ಅಸ್ಸಾಂನ ಜೊಹ್ರಾತ್ ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅಸಿಸ್ಟಂಟ್ ಹಾಗೂ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 34,800 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ icar-nbsslup.org.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು, ಐಸಿಎಆರ್ (ICAR)- ಭಾರತೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ರಾಷ್ಟ್ರೀಯ ಬ್ಯೂರೋ, ಅಮರಾವತಿ ರಸ್ತೆ, ನಾಗ್ಪುರ – 440033.



















