ಬೆಂಗಳೂರು : ನೀವು ಯಾವುದಾದರೂ ವಿಷಯದಲ್ಲಿ ಪದವಿ ಪಡೆದು, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 7 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 7
ಹುದ್ದೆ ಹೆಸರು: ಅಸಿಸ್ಟಂಟ್ ಸೆಕ್ಯುರಿಟಿ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 2
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಕರ್ನಾಟಕದ ಬೆಂಗಳೂರು, ತೆಲಂಗಾಣದ ಹೈದರಾಬಾದ್, ಮಹಾರಾಷ್ಟ್ರದ ನಾಗ್ಪುರ ಸೇರಿ ದೇಶದ ಹಲವೆಡೆ ಇರುವ ಬಿಇಎಲ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



















