ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯಲ್ಲಿ ಖಾಲಿ ಇರುವ (CDAC Recruitment 2026) 60 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಜೆಕ್ಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC)
ಒಟ್ಟು ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 26
8 ಪ್ರಾಜೆಕ್ಟ್ ಮ್ಯಾನೇಜರ್, 23 ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್, 16 ಪ್ರಾಜೆಕ್ಟ್ ಎಂಜಿನಿಯರ್ ಹಾಗೂ 13 ಪ್ರಾಜೆಕ್ಟ್ ಅಸೋಸಿಯೆಟ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಿಇ, ಬಿ.ಟೆಕ್, ಮಾಸ್ಟರ್ ಡಿಗ್ರಿ ಸೇರಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಗರಿಷ್ಠ 56 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ.
ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.1 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು cdac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಅಭ್ಯರ್ಥಿಗಳನ್ನು ಆನ್ ಲೈನ್ ಮೂಲಕ ಸಂದರ್ಶನ ಮಾಡಲಾಗುತ್ತದೆ. ದಾಖಲೆ ಪರಿಶೀಲನೆಯ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ: ಸಿಡಿಎಸಿ, ವೆಲ್ಲಯಂಬಲಂ, ತಿರುವನಂತಪುರಂ
ಇದನ್ನೂ ಓದಿ : ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ AC ಕೋಚ್ – ತಪ್ಪಿದ ಭಾರೀ ಅನಾಹುತ!


















